ಕಡಬ: ಪಟ್ಟಣದ ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿ ಗಮನಾರ್ಹ ಸಾಧನೆ ಮಾಡಿದೆ.
ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದು, ಶಾಲೆಯು ಮತ್ತೊಮ್ಮೆ ತನ್ನ ಶೈಕ್ಷಣಿಕ ಗುಣಮಟ್ಟವನ್ನು ಸಾಬೀತುಪಡಿಸಿದೆ. ಈ ಸಾಧನೆ ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೋಷಕರ ಸಹಕಾರದ ಫಲವೆಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ಈ ಸಾಧನೆ ಶಾಲೆಗೆ ಹೆಮ್ಮೆಯ ಕ್ಷಣವಾಗಿದ್ದು, ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಹಾಗೂ ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಾಶಯಗಳನ್ನು ವ್ಯಕ್ತಪಡಿಸಲಾಗಿದೆ.

Leave a Reply

Your email address will not be published. Required fields are marked *