ಕಡಬ : ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ನಡೆದಿದೆ.

ನೂಜಿಬಾಳ್ತಿಲ ಗ್ರಾಮದ ಖಂಡಿಗ ಲೋಕೇಶ್ ಎಂಬವರ ಪುತ್ರ ಗಗನ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಎಂದಿನಂತೆ ಶಾಲೆಗೆ ತೆರಳಿದ್ದ

ಸಂಜೆ ಶಾಲೆಯಿಂದ ಬಂದು ತನ್ನ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇನ್ನಷ್ಟು ಮಾಹಿತಿ ತಿಳಿಯಬೇಕಾಗಿದೆ.

