ಪುತ್ತೂರು: ಕಲಿಯುಗದ ಪ್ರತ್ಯಕ್ಷ ದೇವರೆಂದೇ ಭಕ್ತರಿಂದ ಕರೆಯಲ್ಪಡುವ ಶ್ರೀನಿವಾಸ ದೇವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಇತಿಹಾಸ ಪ್ರಸಿದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನ.30ರಂದು ಸಂಜೆ ಅತ್ಯಂತ ವೈಭವದಿಂದ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಸಲುವಾಗಿ 16 ನವ ಜೋಡಿಗಳಿಗೆ ಸಾಮೂಹಿಕ ವಿವಾಹ ನ.30ರಂದು ಬೆಳಿಗ್ಗೆ ನಡೆಯಿತು.

16 ನವ ಜೋಡಿಗಳು ಶ್ರೀದೇವಿ ಭೂದೇವಿ ಸಹಿತನಾದ ಶ್ರೀನಿವಾಸ ದೇವರ ಸಮ್ಮುಖದಲ್ಲಿ ಸಪ್ತಪದಿ ತುಳಿಯುವ ಮೂಲಕ ನವಜೀವನಕ್ಕೆ ಕಾಲಿಟ್ಟರು. ಪುತ್ತಿಲ ಪರಿವಾರದ ಪದಾಧಿಕಾರಿಗಳ ಸಹಿತ, ಗಣ್ಯರು, ಪ್ರಮುಖರು ಹಾಗೂ ಹಲವಾರು ಮಂದಿ ಸಂಭ್ರಮಕ್ಕೆ ಸಾಕ್ಷಿಯಾದರು.
ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಇದೆ ಸಂದರ್ಭದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ನ್ಯಾಯವಾದಿ ನರಸಿಂಹ ಪ್ರಸಾದ್ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ತಿಂಗಳಾಡಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್‍ನ ಅಧ್ಯಕ್ಷ ಶ್ರೀರಾಮ ಭಟ್ ಪಾತಾಳ, ಸ್ವಾಗತ ಸಮಿತಿ ಕಾರ್ಯದರ್ಶಿ ಪ್ರೇಮ್‍ರಾಜ್, ಸಹಸಂಚಾಲಕರಾದ ಉಮೇಶ್ ಕೋಡಿಬೈಲ್ ಮತ್ತು ರವಿ ಕುಮಾರ್ ರೈ ಕೆದಂಬಾಡಿಮಠ, ಪ್ರಮುಖರಾದ ಪ್ರಾಣೇಶ್ ಕೆಮ್ಮಾಯಿ, ಭೀಮಯ್ಯ ಭಟ್, ವೆಂಕಟ್ರಮಣ ಕಡಬ, ನವೀನ್ ರೈ ಪಂಜಳ, ಪ್ರೇಮಾ, ಮನೀಶ್ ಕುಲಾಲ್, ರಾಜು ಶೆಟ್ಟಿ, ಅನಿಲ್ ತೆಂಕಿಲ ಸಹಿತ ನೂರಾರು ಮಂದಿ ಪಾಲ್ಗೊಂಡರು.

Leave a Reply

Your email address will not be published. Required fields are marked *