ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತನ್ನು ದೇಶದ ರೈತರಿಗೆ ಬಿಡುಗಡೆ ಮಾಡಿದ್ದಾರೆ. ಈ ಹಂತದಲ್ಲಿ ರಾಷ್ಟ್ರದ 9 ಕೋಟಿ ರೈತರಿಗೆ ಒಟ್ಟು ₹18,000 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ.

ಅನ್ನದಾತರ ಆರ್ಥಿಕ ಬಲವರ್ಧನೆ ಮತ್ತು ಅವರ ಆದಾಯವನ್ನು ದ್ವಿಗುಣಗೊಳಿಸುವುದು ಕೇಂದ್ರ ಸರ್ಕಾರದ ಪ್ರಮುಖ ಗುರಿಯಾಗಿದ್ದು, ಈ ಉದ್ದೇಶದ ಭಾಗವಾಗಿ ಪಿಎಂ ಕಿಸಾನ್ ಯೋಜನೆ ನಿರಂತರವಾಗಿ ರೈತರಿಗೆ ನೆರವು ನೀಡುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಹಣ ಬಿಡುಗಡೆ ಕಾರ್ಯಕ್ರಮವನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ಪ್ರಧಾನಿ ಮೋದಿ, ಕೃಷಿ ಕ್ಷೇತ್ರದ ಬಲವರ್ಧನೆಗಾಗಿ ಸರ್ಕಾರ ಬದ್ಧವಾಗಿದ್ದು, ರೈತರ ಕೈಗೆ ನೇರವಾಗಿ ನೆರವು ತಲುಪುವಂತೆ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *