ಪಂಜ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ (ರಿ.) ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ (ರಿ.) ಮಂಗಳೂರು, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರ ಸಹಯೋಗದೊಂದಿಗೆ ಹಾಗೂ ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇವರ ಆಶ್ರಯದಲ್ಲಿ ರಾಜ್ಯ ಮಟ್ಟದ ಯುವ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವು ಜನವರಿ 18, 2026ರ ಆದಿತ್ಯವಾರ ಪೂರ್ವಾಹ್ನ 10ರಿಂದ ಮಧ್ಯಾಹ್ನ 1ರವರೆಗೆ ಪಂಜದ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ರಾಜ್ಯ ವಿವಿಧ ಭಾಗಗಳಿಂದ ಯುವ ಪಶುಸಂಗೋಪಕರು ಭಾಗವಹಿಸಲಿದ್ದು, ಪಶುಸಂಗೋಪನಾ ಕ್ಷೇತ್ರದಲ್ಲಿ ಜಾಗೃತಿ ಮೂಡಿಸುವುದು ಹಾಗೂ ಉತ್ತಮ ತಳಿ ಅಭಿವೃದ್ಧಿಗೆ ಉತ್ತೇಜನ ನೀಡುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಸಾರ್ವಜನಿಕರು ಹಾಗೂ ಪಶುಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *