ಕಡಬ | ಜ. 08, 2026:
ಕಡಬದ ಜೆಎಂಜೆ ಆಸ್ಪತ್ರೆಯಲ್ಲಿ ಆಯೋಜಿಸಲಾದ ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಕಡಬ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ತಮನ್ನಾ ಜಬೀನ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಸಿ. ಶಿಜಿ ಜಾರ್ಜ್ ಅವರು ಆಗಮಿಸಿದ ಎಲ್ಲರನ್ನು ಸ್ವಾಗತಿಸಿ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಡಾ. ಆದರ್ಶ ಸಂಗಾತಿ (ಎಂ.ಬಿ.ಬಿ.ಎಸ್, ಎಂ.ಡಿ) ಅವರು ಮಧುಮೇಹ ಕಾಯಿಲೆಯ ಕಾರಣಗಳು, ಲಕ್ಷಣಗಳು ಹಾಗೂ ನಿಯಂತ್ರಣ ಕ್ರಮಗಳ ಕುರಿತು ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. ನಿಯಮಿತ ತಪಾಸಣೆ, ಸಮತೋಲನ ಆಹಾರ ಹಾಗೂ ಜೀವನಶೈಲಿ ಬದಲಾವಣೆಗಳ ಅಗತ್ಯತೆಯನ್ನು ಅವರು ಒತ್ತಿ ಹೇಳಿದರು.

ಶಿಬಿರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ರಕ್ತದಲ್ಲಿನ ಶುಗರ್ ಮಟ್ಟ ತಪಾಸಣೆ ನಡೆಸಲಾಗಿದ್ದು, ಅಗತ್ಯವಿದ್ದವರಿಗೆ ವೈದ್ಯಕೀಯ ಸಲಹೆ ಮತ್ತು ಮಾರ್ಗದರ್ಶನ ನೀಡಲಾಯಿತು.
ಪಟ್ಟಣದ ಅನೇಕ ನಾಗರಿಕರು ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದುಕೊಂಡರು.

Leave a Reply

Your email address will not be published. Required fields are marked *