ಆಸ್ಕರ್ ವೇದಿಕೆಯಲ್ಲಿ ಹೊಂಬಾಳೆ ಫಿಲ್ಮ್ಸ್ ಸದ್ದು ಮಾಡುವ ಸಮಯದ ಹತ್ತಿರ ಬರುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ವೇದಿಕೆಗೆ ಪ್ರವೇಶಿಸಿದೆ.
ʻಮಹಾವತಾರ್ ನರಸಿಂಹʼ ಹಾಗೂ ʻಕಾಂತಾರ: ಅಧ್ಯಾಯ 1ʼ ಚಿತ್ರಗಳು ಅಧಿಕೃತವಾಗಿ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ಸ್ಥಾನ ಪಡೆದುಕೊಂಡಿವೆ. ಇದು ಭಾರತೀಯ ಚಿತ್ರರಂಗಕ್ಕೆ ಹೆಮ್ಮೆ ಹಾಗೂ ಐತಿಹಾಸಿಕ ಕ್ಷಣವಾಗಿದೆ.





ಕಳೆದ ವರ್ಷ ‘ಕಾಂತಾರ-1’ ಹಾಗೂ ‘ಮಹಾವತಾರ್ ನರಸಿಂಹ’ ಚಿತ್ರಗಳು ತೆರೆಕಂಡು ಜನಮನ ಗೆದ್ದಿದ್ದವು. ಕೋಟಿ ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದ್ದವು. ಚಿತ್ರಗಳನ್ನ ಆಸ್ಕರ್ ವೇದಿಕೆಗೆ ಕೊಂಡೊಯ್ಯುವ ಪ್ರಯತ್ನ ಮಾಡುವುದಾಗಿ ಹೊಂಬಾಳೆ ಸಂಸ್ಥೆ ಹೇಳಿತ್ತು. ಆನಿಮೇಟೆಡ್ ಸಿನಿಮಾ ವಿಭಾಗದಲ್ಲಿ ‘ಮಹಾವತಾರ್ ನರಸಿಂಹ’ ಚಿತ್ರಕ್ಕೆ ಪ್ರಶಸ್ತಿ ಗ್ಯಾರಂಟಿ ಎನ್ನಲಾಗ್ತಿದೆ. ಈ ವರ್ಷದ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ಕಾಣಿಸಿಕೊಂಡ 5 ಭಾರತೀಯ ಚಿತ್ರಗಳಲ್ಲಿ 2 ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಸಿನಿಮಾ ಅನ್ನೋದು ಮತ್ತೊಂದು ವಿಶೇಷ.





