ಪುತ್ತೂರು : ಜ. 10 ರಿಂದ ಜ.12 ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ನಡೆಯುವ ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಬೆಂಗಳೂರು ಜಿಲ್ಲಾ ಕೃಷಿಕ ಸಮಾಜ, ದಕ್ಷಿಣ ಕನ್ನಡ ಇದರ ವತಿಯಿಂದ ಎಸಿ ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಸುದ್ದಿ ಅರಿವು ಕೇಂದ್ರ ಪುತ್ತೂರು ಹಾಗೂ ರೈತ ಕುಡ್ಲ ಪ್ರತಿಷ್ಠಾನ (ರಿ), ಪುತ್ತೂರು ಇದರ ಸಹಯೋಗದೊಂದಿಗೆ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ ಹಾಗೂ ಸಸ್ಯಜಾತ್ರೆ ಅಂಗವಾಗಿ “ಉಜ್ಜಿವನ ಮಳಿಗೆ”ಯ ಉದ್ಘಾಟನೆ ಕಾರ್ಯಕ್ರಮವು ನಾಳೆ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಚಿಂತಕರಾದ ಶ್ರೀಮತಿ ಗೀತಾ ಮನಮೋಹನ್ ಮಾಡಲಿದ್ದು, ಈ ಸಂದರ್ಭದಲ್ಲಿ ಪುತ್ತೂರು ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ಟ, ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾದ ಅಮೃತಕೃಷ್ಣ ಎನ್ ಉಪಸ್ಥಿತಲಿರಲಿದ್ದಾರೆ.
ಸಂಪರ್ಕಿಸಿ : 7676512393, 8217717273










