ಕಲ್ಲಡ್ಕ: ಕಲ್ಲಡ್ಕ ಸಮೀಪದ ಸಮುದ್ರ ಹೋಟೆಲ್ ಬಳಿ ನಿಲ್ಲಿಸಿದ್ದ ಟ್ಯಾಂಕರ್ಗೆ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.





ಘಟನೆಯ ಪರಿಣಾಮ ಗೂಡ್ಸ್ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಂಭೀರ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಗೂಡ್ಸ್ ವಾಹನಕ್ಕೆ ಹಾನಿಯಾಗಿದ್ದು, ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಸ್ಥಳಕ್ಕೆ ಸ್ಥಳೀಯರು ಧಾವಿಸಿ ಗಾಯಾಳುವಿಗೆ ಸಹಾಯ ಮಾಡಿದ್ದು, ಬಳಿಕ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲಾಯಿತು. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.




