ಬಸ್ ಸಂಚಾರ ಅವ್ಯವಸ್ಥೆ, ಸಮಯಪಾಲನೆ ಕೊರತೆ ಬಗ್ಗೆ ಗಮನ
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಿಗೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎ.ಬಿ.ವಿ.ಪಿ.) ವತಿಯಿಂದ ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳ ಕುರಿತು ಇಂದು ಮುಂದುವರಿದ ಮನವಿಯನ್ನು ಸಲ್ಲಿಸಲಾಯಿತು.





ಇತ್ತೀಚೆಗೆ ಸುಳ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯ ಮುಂದುವರಿದ ಭಾಗವಾಗಿ ಈ ಮನವಿಯನ್ನು ಸಲ್ಲಿಸಲಾಗಿದ್ದು, ಬಸ್ಗಳ ಅನಿಯಮಿತ ಸಂಚಾರ, ಸಮಯಪಾಲನೆಯ ಕೊರತೆ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸಮರ್ಪಕ ಸಂಪರ್ಕ ವ್ಯವಸ್ಥೆಯ ಕೊರತೆಯ ಬಗ್ಗೆ ಶಾಸಕರ ಗಮನ ಸೆಳೆಯಲಾಯಿತು. ಈ ಸಮಸ್ಯೆಗಳು ವಿದ್ಯಾರ್ಥಿಗಳ ದಿನನಿತ್ಯದ ಶಿಕ್ಷಣಕ್ಕೆ ಮಾತ್ರವಲ್ಲದೆ ಅವರ ಭದ್ರತೆಯ ಮೇಲೂ ಗಂಭೀರ ಪರಿಣಾಮ ಬೀರುತ್ತಿವೆ ಎಂದು ಎಬಿವಿಪಿ ಮುಖಂಡರು ತಿಳಿಸಿದರು.


ಈ ಸಂದರ್ಭದಲ್ಲಿ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮುಳಿಯ ಸಾತ್ವಿಕ್, ಎಬಿವಿಪಿ ನಗರ ಕಾರ್ಯದರ್ಶಿ ಪುನೀತ್ ಎಚ್., ಹೋರಾಟ ಪ್ರಮುಖ್ ಕೀರ್ತನ್, ಶ್ರೀಶರಣ್ ಮೊಗ್ರ ಹಾಗೂ ಅಮಿತ್ ನಾಯಕ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತ್ವರಿತ ಹಾಗೂ ಶಾಶ್ವತ ಪರಿಹಾರ ಒದಗಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದ ಎಬಿವಿಪಿ ನಾಯಕರು, ವಿದ್ಯಾರ್ಥಿಗಳ ಹಿತಕ್ಕಾಗಿ ತಮ್ಮ ಹೋರಾಟ ನಿರಂತರವಾಗಿದ್ದು, ಬೇಡಿಕೆಗಳು ಈಡೇರಿಸುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.


