ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.

ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಕಾಂತ್ ಪಂಗಾರ್ಕರ್ ಸ್ಪರ್ಧಿಸಿದ್ದರು. ಶ್ರೀಕಾಂತ್ ಎದುರು ಬಿಜೆಪಿ ಮತ್ತು ಇತರ ಪಕ್ಷಗಳು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಆ ವಾರ್ಡ್‌ನಲ್ಲಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ.

ಪಂಗಾರ್ಕರ್ 2001 ಮತ್ತು 2006 ರ ನಡುವೆ ಅವಿಭಜಿತ ಶಿವಸೇನೆಯಿಂದ ಜಲ್ನಾ ಪುರಸಭೆಯ ಸದಸ್ಯರಾಗಿದ್ದರು. 2011 ರಲ್ಲಿ ಶಿವಸೇನೆ ಅವರಿಗೆ ಟಿಕೆಟ್ ನಿರಾಕರಿಸಿದ ನಂತರ ಅವರು ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಯನ್ನು ಸೇರಿದ್ದರು.

Leave a Reply

Your email address will not be published. Required fields are marked *