ಬೊಳುವಾರು ಸುಬ್ರಹ್ಮಣ್ಯ ನಗರದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಂಜನೇಯ ಶಾಖೆ ಬೊಳುವಾರು ವತಿಯಿಂದ ಹಿಂದೂ ಬಾಂಧವರ ಸಹಕಾರದೊಂದಿಗೆ ಸರ್ಪ ಸಂಸ್ಕಾರ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು.






ಧಾರ್ಮಿಕ ಸಂಪ್ರದಾಯಗಳಂತೆ ಸರ್ಪ ಸಂಸ್ಕಾರ ಪೂಜೆಯನ್ನು ವಿಧಿವಿಧಾನಗಳೊಂದಿಗೆ ನಡೆಸಲಾಗಿದ್ದು, ನಂತರ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮಕ್ಕೆ ಸ್ಥಳೀಯ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ಕೆ ಸಹಕಾರ ನೀಡಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು.




