ಪುತ್ತೂರು: ಗ್ಯಾಸ್ ಬಲೂನೊಂದು ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಶಾರ್ಟ್ ಸರ್ಕ್ಯೂಟ್ ಉಂಟಾಗಿ ರಸ್ತೆಬದಿ ನಿಂತಿದ್ದ ಕಾರಿಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಪಡುಮಲೆ ಶ್ರೀ ಪೂಮಾಣಿ–ಕಿನ್ನಿಮಾಣಿ ಹಾಗೂ ವ್ಯಾಘ್ರ ಚಾಮುಂಡಿ ದೈವಸ್ಥಾನದ ವಠಾರದಲ್ಲಿ ಜನವರಿ 18ರಂದು ನಡೆದಿದೆ.

ಜಾತ್ರೋತ್ಸವ ನಡೆಯುತ್ತಿದ್ದ ವೇಳೆ ಗಾಳಿಯಲ್ಲಿ ಹಾರಿ ಬಂದ ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿದ್ದು, ಅದರಿಂದ ಉಂಟಾದ ಕಿಡಿ ರಸ್ತೆಬದಿ ನಿಂತಿದ್ದ ಕಾರಿನ ಮೇಲೆ ಬಿದ್ದಿದೆ. ಬೆಂಕಿ ತಗುಲಿದ ಪರಿಣಾಮ ಕಾರು ಸ್ವಯಂಚಾಲಿತವಾಗಿ ಸ್ವಲ್ಪ ಮುಂಭಾಗಕ್ಕೆ ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಘಟನೆ ಗಮನಿಸಿದ ಸ್ಥಳೀಯರು ತಕ್ಷಣವೇ ನೀರು ಹಾಯಿಸುವ ಮೂಲಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದು, ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಘಟನೆಯಿಂದ ಜಾತ್ರೋತ್ಸವದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Leave a Reply

Your email address will not be published. Required fields are marked *