ಕಡಬ:
ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿದ್ದ ಉದ್ಯಮಿ ಅಶೋಕ್ ಕುಮಾರ್ ರೈ ವಜ್ರಪಾಣಿ ಅವರು ಇಂದು ಹೃದಯಘಾತದಿಂದ ನಿಧನ ಹೊಂದಿದ್ದಾರೆ.





ಅವರು ಅಸ್ವಸ್ಥಗೊಂಡು ಮನೆಯಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಅಶೋಕ್ ಕುಮಾರ್ ರೈ ವಜ್ರಪಾಣಿ ಅವರು ಕಡಬ ಪರಿಸರದಲ್ಲಿ ನ್ಯಾಚುರಲ್ ವಾಟರ್ ವಿತರಕರಾಗಿ ಪರಿಚಿತರಾಗಿದ್ದು, ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಜೊತೆಗೆ ಕಡಬ ಯಕ್ಷಗಾನ ಗೆಳೆಯರ ಬಳಗದ ಗೌರವ ಅಧ್ಯಕ್ಷರಾಗಿ, ಒಡಿಯೂರು ವಿವಿಧೋದ್ದೇಶ ಸಹಕಾರಿ ಸಂಘದ ಕಡಬ ಶಾಖೆಯ ಸಲಹಾ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.


ಹಲವಾರು ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಕಡಬ ಪರಿಸರದಲ್ಲಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು.
ಅವರು ತಮ್ಮ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕಡಬ ಪರಿಸರದ ವಿವಿಧ ಸಂಘಟನೆಗಳು, ಗಣ್ಯರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.


