ಪುತ್ತೂರು : ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಟ್ಟೆಗೆ ಬೆಂಕಿ ತಗುಲಿ ಗಾಯಗೊಂಡು, ಚಿಂತಾ ಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಒಳಮೊಗ್ರು ಗ್ರಾಮದ ಮುರುವ ನಿವಾಸಿ ಐಸಮ್ಮ (75) ರವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತರಳಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಜನವರಿ 18ರಂದು ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೃತರ ಪುತ್ರಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *