ಭಾರತದ ಅತೀ ದೊಡ್ಡ ಮ್ಯಾರಥಾನ್ ನಲ್ಲಿ ಒಂದಾದ ಟಾಟಾ ಮುಂಬೈ ಮ್ಯಾರಥಾನ್ನಲ್ಲಿ ಜಸ್ಮಿತಾ ಗಮನಾರ್ಹ ಸಾಧನೆ ಮಾಡಿದ್ದಾರೆ. ಮುಂಬೈ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿ 10 ಕಿ.ಮೀ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು 10,000 ರೂ. ನಗದು ಬಹುಮಾನಕ್ಕೆ ಭಾಜನರಾಗಿದ್ದಾರೆ.
ಜನವರಿ 19ರಂದು ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಲ್ ಗ್ರೌಂಡ್‌ನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ದೇಶದ ವಿವಿಧ ಭಾಗಗಳಿಂದ ಸುಮಾರು 70,000ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಇವರು ಬಲ್ಪ ಗ್ರಾಮದ ಕೊಡೆಂಕಿರಿ ವಾಚಣ್ಣ ಗೌಡ ಮತ್ತು ದಮಯಂತಿ ದಂಪತಿಗಳ ಪುತ್ರಿ.

2025ನೇ ಸಾಲಿನ ದಕ್ಷಿಣ ಏಷ್ಯಾ ರಾಷ್ಟ್ರೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಜಸ್ಮಿತಾ ಮ್ಯಾರಥಾನ್ ವಿಭಾಗದಲ್ಲಿ ಅನೇಕ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *