ಪುತ್ತೂರು: ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಪುತ್ತೂರು ಯಂ. ಸಂಜೀವ ಶೆಟ್ಟಿ ಜವಳಿ ಮಳಿಗೆಯ ಎದುರು ನಡೆದಿದೆ.
ಗಾಯಗೊಂಡ ಸವಾರನನ್ನು ಪುತ್ತೂರು ನಿವಾಸಿ ಕುರಿಯ ನೈತ್ತಾಡಿ ನಿವಾಸಿ ಗಾತಮಿ (20) ಎಂದು ಗುರುತಿಸಲಾಗಿದೆ.
ಅವರು ಚಲಾಯಿಸುತ್ತಿದ್ದ ಸ್ಕೂಟರ್ ಮತ್ತು ವಿರುದ್ಧ ದಿಕ್ಕಿನಿಂದ ಕೊರಗಪ್ಪ ಗೌಡ ಎಂಬವರು ಚಲಾಯಿಸುತ್ತಿದ್ದ ಆಟೋರಿಕ್ಷ ನಡುವೆ ಡಿಕ್ಕಿ ಸಂಭವಿಸಿದೆ.





ಪರಿಣಾಮ ಸ್ಕೂಟರ್ ಸವಾರ ರಸ್ತೆ ಮೇಲೆ ಬಿದ್ದು ಗಾಯಗೊಂಡರು.
ಗಾಯಾಳುವನ್ನು ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಘಟನೆ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




