ಪುತ್ತೂರು ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕನಿಗೆ ಗಾಯಗಳಾಗಿವೆ. ಘಟನೆ ನಡೆದ ಸ್ಥಳಕ್ಕೆ ಸ್ಥಳೀಯರು ತಕ್ಷಣ ಧಾವಿಸಿ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ಒದಗಿಸಿದರು.





ಅಪಘಾತದ ಪರಿಣಾಮ ರಿಕ್ಷಾ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಕಾರಿನ ಮುಂಭಾಗಕ್ಕೂ ನಷ್ಟ ಉಂಟಾಗಿದೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




