ಬೆಳ್ತಂಗಡಿ ಸಮೀಪದ ಮದ್ದಡ್ಕ ಸಹನಾ ಕ್ಲಿನಿಕ್ ವೈದ್ಯರಾದ ಹರೀಶ್ ಶೆಟ್ಟಿ ಅವರ ಪುತ್ರ ಹೇಮಂತ್ ಶೆಟ್ಟಿ (28) ಅವರು ಭಾನುವಾರ ಸಂಜೆ ಮನೆಯಲ್ಲಿಯೇ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದ್ದು, ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್‌ರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *