ಕಡಬ: ಕಾಯರ್ಕ್ರಮವನ್ನು ಕಡಬ ಪಟ್ಟಣ ಪಂಚಾಯಿತಿ ಅಧೀನದ ತಮನಾ ಜಬಿನ್ ಉದ್ಯಾನದಲ್ಲಿ ಜ.26ರಂದು 77ನೇ ಗಣರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ತಹಶೀಲ್ದಾರ್ ಪ್ರಭಾಕರ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.





ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಭಾರತ ಸಂವಿಧಾನವೇ ನಮ್ಮ ದೇಶದ ದಾರಿದೀಪ. ಅದು ಸಮಾನತೆ, ಸ್ವಾತಂತ್ರ್ಯ, ಧರ್ಮನಿರಪೇಕ್ಷತೆ ಮತ್ತು ಸಾಮಾಜಿಕ ನ್ಯಾಯದ ಪ್ರತೀಕ. ಜಾತಿ, ಧರ್ಮ, ಭಾಷೆ, ಬೇಧಭಾವವನ್ನು ಮೀರಿ ಎಲ್ಲರೂ ಸಂವಿಧಾನದ ಮೌಲ್ಯಗಳನ್ನು ಪಾಲಿಸಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ರಾಷ್ಟ್ರಗೀತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಗಣರಾಜ್ಯೋತ್ಸವಕ್ಕೆ ವಿಶೇಷ ಮೆರುಗು ನೀಡಲಾಯಿತು.
ಇದೇ ವೇಳೆ ಸಂವಿಧಾನ ಸಂರಕ್ಷಣೆಯ ಕುರಿತು ಮಾತನಾಡಿದ ರಾಘವೇಂದ್ರ ಜಂಬೂರಾಜ್ ಅವರು, “ಭಾರತದ ಸಂವಿಧಾನವು ಜಗತ್ತಿನ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾಗಿದೆ. ಇದರಲ್ಲಿ 500ಕ್ಕೂ ಹೆಚ್ಚು ವಿಧಿಗಳು (Articles), 120ಕ್ಕೂ ಹೆಚ್ಚು ತಿದ್ದುಪಡಿಗಳು ಸೇರಿವೆ. ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಹೇಳಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಲಾಯಿತು.




