ಸುಬ್ರಹ್ಮಣ್ಯ: ಮಂಗಳೂರು ಮೆಸ್ಕಾಂ ಕಾರ್ಯ ಮತ್ತು ಪಾಲನಾ ವ್ಯವಹಾರಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಸುಬ್ರಹ್ಮಣ್ಯದಲ್ಲಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ. ಸಭೆಯು ಜನವರಿ 29ರಂದು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದಲ್ಲಿ ನಡೆಯಲಿದೆ.ಮೆಸ್ಕಾಂ ಗ್ರಾಹಕರು ವಿದ್ಯುತ್‌ಗೆ ಸಂಬಂಧಿಸಿದ ತಮ್ಮ ಕುಂದುಕೊರತೆಗಳನ್ನು ಸಭೆಯಲ್ಲಿ ನೇರವಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.





ಬರಲು ಸಾಧ್ಯವಾಗದವರು ದೂರವಾಣಿ ಕರೆ ಮೂಲಕವೂ ತಮ್ಮ ಸಮಸ್ಯೆಗಳನ್ನು ತಿಳಿಸಲು ಅವಕಾಶ ನೀಡಲಾಗಿದೆ. ಸಭೆಯಲ್ಲಿ ದೊರಕುವ ದೂರುಗಳಿಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಸ್ಥಳದಲ್ಲೇ ಸ್ಪಂದನೆ ನೀಡಲಿದ್ದಾರೆ.
ಜನಸಂಪರ್ಕ ಸಭೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಹಾಗೂ ದೂರು ಸಲ್ಲಿಸಲು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 08257-200699.
ಸುಬ್ರಹ್ಮಣ್ಯ ಭಾಗದ ಎಲ್ಲಾ ಮೆಸ್ಕಾಂ ವಿದ್ಯುತ್ ಗ್ರಾಹಕರು ಈ ಸಭೆಯ ಪ್ರಯೋಜನ ಪಡೆದುಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.




