ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ಜಪ್ತಿ ಮಾಡಿದ ಘಟನೆ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ತಕ್ಷಣ ತೆರಳಿದ ಪೋಲೀಸರು KA-21-A-0244 ಸಂಖ್ಯೆಯ ಪಿಕಪ್ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ವಾಹನದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಜಪ್ತಿ ಮಾಡಲಾದ ಮರಳಿನ ಮೌಲ್ಯವನ್ನು ಅಂದಾಜು ₹4,000 ಎಂದು ಅಂದಾಜಿಸಲಾಗಿದ್ದು, ಪಿಕಪ್ ವಾಹನದ ಮೌಲ್ಯ ಸುಮಾರು ₹1,50,000 ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕುಮಾರದಾರ ನಿವಾಸಿ ರೇಣುಕಾಪ್ರಸಾದ್ (31) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 04/2026 ಕಲಂ 303(2) BNS–2023 ರಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.
ಅಕ್ರಮ ಮರಳು ಸಾಗಾಟ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *