ಪುತ್ತೂರು; ಕಳೆದ ೫೦ ವರ್ಷಗಳಿಂದ ಪುತ್ತೂರಿನಲ್ಲಿ ಹಲವು ಸಮಾಜಮುಖಿ ಕೆಲಸಗಳನ್ನು ಆಯೋಜಿಸುತ್ತಾ ಬಂದಿರುವ ನೆಲ್ಲಿಕಟ್ಟೆ ಮಿತ್ರಮಂಡಲದ ಸುವರ್ಣಸಂಭ್ರಮ ಕಾರ್ಯಕ್ರಮ ಫೆ.೧ರಂದು ನಡೆಯಲಿದೆ ಎಂದು ಸಂಚಾಲಕ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ೫೦ ಸಂಭ್ರಮದ ಹಿನ್ನಲೆಯಲ್ಲಿ ಈಗಾಗಲೇ ರಕ್ತದಾನ ಶಿಬಿರ, ಕ್ರೀಡಾಕೂಟಗಳನ್ನು ನಡೆಸಲಾಗಿದ್ದು, ಫೆ.೧ರಂದು ಮಧ್ಯಾಹ್ನ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುವುದು. ಸಂಜೆ ೬ ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ವೇದಮೂರ್ತಿ ಲಕ್ಷ್ಮೀಶ ತಂತ್ರಿ ಕೆಮ್ಮಿಂಜೆ ಉದ್ಘಾಟಿಸಲಿದ್ದಾರೆ.

ಗೌರವಾಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಅಶೋಕ್ ರೈ, ಸಂಸದ ಬ್ರಿಜೇಶ್ ಚೌಟ, ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಕುಕ್ಕೆ ಸುಬ್ರಹ್ಮಣ್ಯ ದೇವಳದ ಅಧ್ಯಕ್ಷ ಹರೀಶ್ ಇಂಜಾಡಿ, ಉಪ್ಪಿನಂಗಡಿ ದೇವಳದ ಅಧ್ಯಕ್ಷ ರಾಧಾಕೃಷ್ಣ ನಾಯ್ಕ್, ಜಿ.ಎಲ್ ಗ್ರೂಫ್ ವ್ಯವಸ್ಥಾಪಕ ನಿರ್ದೇಶಕ ಬಲರಾಮ ಆಚಾರ್ಯ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ನಿರ್ದೇಶಕ ನವೀನ್ ಭಂಡಾರಿ, ಉದ್ಯಮಿ ಶಿವರಾಮ ಆಳ್ವ, ಉದ್ಯಮಿ ಮಹಮ್ಮದ್ ಇಬ್ರಾಹಿಂ, ಉದ್ಯಮಿ ಉಜ್ವಲ್ ಪ್ರಭು ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉದ್ಯಮಿ ಸಿದ್ದನಾಥ್ ಎಸ್.ಕೆ, ಕೋಟಿಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಎನ್, ಉದ್ಯಮಿ ರೋಶನ್ ರೈ, ಉದ್ಯಮಿ ಪ್ರಸನ್ನ ಕುಮಾರ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಜೋಕಿಂ ಡಿಸೋಜ, ಸುದ್ದಿ ಸಮೂಹಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.
ಕಾರ್ಯಕ್ರಮದಲ್ಲಿ ಜೀವ ರಕ್ಷಕ ಈಶ್ವರ್ ಮಲ್ಪೆ, ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಅಜಯ್ ಅವರನ್ನು ಸನ್ಮಾನಿಸಲಾಗುವುದು. ನಿವೃತ್ತ ಶಿಕ್ಷಕಿ ಮೀನಾಕ್ಷಿ, ನಿವೃತ್ತ ಅಂಗನವಾಡಿ ಪರಿಚಾರಕಿ ಕುಸುಮಕ್ಕ, ಸ್ಮಶಾನ ಪಾಲಕ ಸತೀಶ್ ಮಡಿವಾಳ, ನಿವೃತ್ತ ಸೈನಿಕರಾದ ಜೋ ಡಿಸೋಜ, ನರಸಿಂಹ ಭಂಡಾರ್ಕರ್, ಕುಶಾಲಪ್ಪ ಗೌಡ ಹಾಗೂ ಎಡ್ವರ್ಡ್ ಡಿಸೋಜ ಅವರಿಗೆ ಗೌರವಾರ್ಪಣೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಿತ್ರಮಂಡಳಿಯ ಸ್ಥಾಪಕಾಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ಶೆಟ್ಟಿ, ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆ, ಬೀಚ್ ರೆಸ್ಲಿಂಗ್ ಕಮಿಟಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ನೆಲ್ಲಿಕಟ್ಟೆ, ಉದ್ಯಮಿ ಸಂದೀಪ್ ನೆಲ್ಲಿಕಟ್ಟೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *