ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಮಂಜಲಡ್ಪು ಪ್ರದೇಶದಲ್ಲಿ ನಡೆದಿದೆ.

ಘಟನೆಯ ಪರಿಣಾಮವಾಗಿ ಕಾರು ಸಂಪೂರ್ಣವಾಗಿ ನುಚ್ಚು ಗುಜ್ಜರದಂತಾಗಿದೆ ಮತ್ತು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಗಾಯಗೊಂಡವರಲ್ಲಿ ಒಬ್ಬ ಮಹಿಳೆಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ

Leave a Reply

Your email address will not be published. Required fields are marked *