ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ತಾಲೂಕು ಇದರ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಉಪ್ಪಿನಂಗಡಿ ವಲಯ ಇದರ ಪ್ರಾಯೋಜಕತ್ವದೊಂದಿಗೆ ಒಕ್ಕಲಿಗ ಗೌಡ ಮಹಿಳಾ ಸೇವಾ ಸಂಘ ಪುತ್ತೂರು, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಪುತ್ತೂರು ಇದರ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ಗೌಡರ ಯುವ ಕ್ರೀಡಾ ಸಂಭ್ರಮ -2026 ಫೆ.15ರಂದು ಬೆಳಿಗ್ಗೆ ಗಂಟೆ 9 ರಿಂದ ಉಪ್ಪಿನಂಗಡಿ ಪೆರಿಯಡ್ಕದ ಸರ್ವೋದಯ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಉಪ್ಪಿನಂಗಡಿ ವಲಯ ಉಸ್ತುವಾರಿ ಸುರೇಶ್ ಗೌಡ ಅತ್ರಮಜಲು ಮತ್ತುಕ್ರೀಡಾ ಸಂಚಾಲಕ ಶ್ರೀಧರ ಮಠಂದೂರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.






ಪ್ರತಿ ವರ್ಷ ನಡೆಯುವ ಯುವ ಒಕ್ಕಲಿಗ ಗೌಡರ ಯುವ ಕ್ರೀಡಾ ಸಂಭ್ರಮ ಈ ಭಾರಿ ಉಪ್ಪಿನಂಗಡಿ ವಲಯದ ಆತಿಥ್ಯದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ ಗಂಟೆ 8ಕ್ಕೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಿಂದ ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯ ತನಕ ಕ್ರೀಡಾಜ್ಯೋತಿ ಮೆರವಣಿಗೆ ನಡೆಯಲಿದೆ. ಬಜತ್ತೂರು ಗ್ರಾ.ಪಂ ಅಧ್ಯಕ್ಷ ಗಂಗಾಧರ ಗೌಡ ಪಿ.ಎನ್ ಅವರು ಉದಾಟಿಸಲಿದ್ದಾರೆ. ಕೃಷಿಕರಾದ ಜನಾರ್ದನ ಗೌಡ ಶಾಂತಿದಡ್ಡ, ಸರ್ವೋದಯ ಪ್ರೌಢಶಾಲೆಯ ಪರಿವೀಕ್ಷಕ ಬಾಲಕೃಷ್ಣ ಬಿ.ಟಿ ಅವರು ಉಪಸ್ಥಿತಿಯಲ್ಲಿರುತ್ತಾರೆ. 11.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುಂದರ ಗೌಡ ನಡುಬೈಲು ಧ್ವಜಾರೋಹಣ ಮಾಡಲಿದ್ದಾರೆ.
ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಹರೀಶ್ ಅರಿಕೋಡಿ ದೀಪ ಪ್ರಜ್ವಲಿಸಲಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ನಿವೃತ್ತ ಮುಖ್ಯೋಪಾಧ್ಯಾಯ ಉಮೇಶ್ ಗೌಡ ಬಂಡಾಡಿ, ಎಸ್.ಆರ್.ಕೆ.ಲ್ಯಾರ್ಸ್ ನ ಮಾಲಕ ಕೇಶವ ಗೌಡ ಅಮೈ ಕಲಾಯಿಗುತ್ತು, ಕುಕ್ಕಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಜ್ಜಾಡಿ, ಸದಸ್ಯ ಪ್ರಸನ್ನ ದರ್ಬೆ, ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ಅತಿಥಿಗಳಾಗಿ ಭಾಗವಹಿಸಲಿದ್ದಾರೆ


ಬೈಲು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾಜದಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವುದು. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ ಪುಷ್ಪಗಿರಿ, ಪುತ್ತೂರು ತಾಲೂಕು ಗೌಡ ಮಹಿಳಾ ಸಂಘದ ಅಧ್ಯಕ್ಷೆ ಕುಸು ಚಂದಪ್ಪ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ್, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.
ಕ್ರೀಡೋತ್ಸವದಲ್ಲಿ ನಮ್ಮ ಸಮಾಜದ ಅಂಗನವಾಡಿ ಪುಟಾಣಿಗಳಿಗೆ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಉಳಿದಂತೆ 14 ವಯೋಮಾನ, 17 ವಯೋಮಾನ ಮತ್ತು ಪುರುಷರಿಗೆ, ಮಹಿಳೆಯರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸುಮಾರು 1500ಕ್ಕೂ ಮಿಕ್ಕಿ ಸ್ಪರ್ಧಿಗಳು ಭಾಗವಹಿಸಲಿದ್ದು, ನಮ್ಮ ಸಮಾಜದ 35 ಮಂದಿ ದೈಹಿಕ ಶಿಕ್ಷಣ ಶಿಕ್ಷಕರು ತೀರ್ಪುಗಾರರಾಗಿ ಸಹಕಾರ ನೀಡಲಿದ್ದಾರೆ ಎಂದು ಹೇಳಿದರು.
ಪುತ್ತೂರು ತಾಲೂಕಿಗೆ ಸಂಬಂಧಿಸಿದ ಒಕ್ಕಲಿಗ ಗೌಡ ಸೇವಾ ಸಂಘದಿಂದ 6 ವಲಯಗಳಿದ್ದು ಅದರಲ್ಲಿ ಪ್ರತಿ ವರ್ಷ ಒಂದೊಂದು ವಲಯದಿಂದ ಕ್ರೀಡಾಕೂಟ ಏರ್ಪಡಿಸಲಾಗುತ್ತಿದೆ. ಈ ಭಾರಿ ಉಪ್ಪಿನಂಗಡಿ ವಲಯದಿಂದ ಕ್ರೀಡಾಕೂಟ ನಡೆಯಲಿದ್ದು, ಉಪ್ಪಿನಂಗಡಿ ವಲಯಕ್ಕೆ ಸಂಬಂಧಿಸಿ ಉಪ್ಪಿನಂಗಡಿ, ಹಿರೇಬಂಡಾಡಿ, ಬಜತ್ತೂರು, ಕೋಡಿಂಬಾಡಿ, ನೆಕ್ಕಿಲಾಡಿ ಗ್ರಾಮದ ಸಮಿತಿಯ ಪದಾಧಿಕಾರಿಗಳ ಕ್ರೀಡಾಕೂಟ ನಡೆಸಲಿದ್ದಾರೆ. ಬೆಳಗ್ಗಿನಿಂದ ಸಂಜೆಯ ತನಕ ಕ್ರೀಡಾಕೂಟ ನಡೆಯಲಿದೆ ಎಂದು ಪುತ್ತೂರು ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಪ್ರಶಾಂತ್ ಕೆಮ್ಮಾಯಿ ಅವರು ವಿವರಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ಉಪ್ಪಿನಂಗಡಿ ವಲಯ ಅಧ್ಯಕ್ಷ ನಿತಿನ್ ತಾರಿತ್ತಡಿ ಅವರು ಉಪಸ್ಥಿತರಿದ್ದರು.

