ಬೆಳ್ಳಾರೆ: ಗ್ರಾಮೀಣಾಭಿವೃದ್ಧಿ ಹಾಗೂ ಕುಡಿಯುವ ನೀರಿನ ಯೋಜನೆಯಡಿ ನಿರ್ಮಿಸಲಾದ ಘಟಕದ ಟ್ಯಾಂಕ್ ಇಂದು ಸ್ಪೋಟಗೊಂಡ ಘಟನೆ ಬೆಳ್ಳಾರೆ ಗ್ರಾಮದಲ್ಲಿ ನಡೆದಿದೆ.
ತಾಂತ್ರಿಕ ಅಡಚಣೆಗಳಿಂದಾಗಿ ಟ್ಯಾಂಕ್‌ನ ಅನಿಲ ಸಂಗ್ರಹಿಸಿದ ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಸ್ಥಳದಲ್ಲಿದ್ದ ಗಾಜುಗಳು ಪುಡಿ ಪುಡಿಯಾಗಿವೆ. ಘಟನೆ ವೇಳೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಈ ಟ್ಯಾಂಕ್ ಸ್ಪೋಟದ ಬಗ್ಗೆ ಸ್ಥಳೀಯ ತಾಲೂಕು ಪಂಚಾಯತ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಘಟನೆಯ ಕಾರಣವನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವೀಣಾ ಮೋಟಾಯಿತೋಟ, ಸದಸ್ಯರಾದ ಅನಿಲ್ ರೈ ಚಾವಡಿಬಾಗಿಲು, ಮಣಿಕಂಠ ಕಲ್ಯಾಣೆ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *