ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ (ಗ್ರಾಮಾಂತರ) ಹಾಗೂ ಪುತ್ತೂರು ವಿಧಾನ ಸಭಾ ಕ್ಷೇತ್ರ ಮತ್ತು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಗಳ ಪದಗ್ರಹಣ ಸಮಾರಂಭ ಹಾಗೂ ಕಾರ್ಯಕರ್ತರ ಸಮಾವೇಶ ಫೆ.೧೬ರಂದು ಬೆಳಗ್ಗೆ ೧೦ ಗಂಟೆಗೆ ಪುತ್ತೂರಿನ ಜೈನ ಭವನದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ (ಗ್ರಾಮಾಂತರ) ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈಗಾಗಲೇ ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಬಂಟ್ವಾಳ ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲಾ (ಗ್ರಾಮಾಂತರ) ಕಾಂಗ್ರೆಸ್ ಪ್ರಚಾರ ಸಮಿತಿ ರಚಿಸಿ ನನ್ನನ್ನು ಅಧ್ಯಕ್ಷರನ್ನಾಗಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ನೇಮಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ೪ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷದ ಪರ ವ್ಯವಸ್ಥಿತವಾಗಿ ಪ್ರಚಾರ ಮಾಡುವ ಕಾರ್ಯವನ್ನು ಸಮಿತಿ ಮಾಡಲಿದೆ. ಇದು ಚುನಾವಣೆಯ ಕಾಲದಲ್ಲಿ ಮಾತ್ರ ಇರುವ ಸಮಿತಿಯಲ್ಲö. ನಿರಂತರ ಅಸ್ತಿತ್ವದಲ್ಲಿರುವ ಸಮಿತಿ. ಸರಕಾರದ ಕಾರ್ಯಕ್ರಮಗಳು, ಪಕ್ಷದ ಕಾರ್ಯಕ್ರಮ ಮತ್ತು ಪಕ್ಷದ ಸಿದ್ಧಾಂತದ ಬಗ್ಗೆ ನಿತ್ಯ ನಾನಾ ರೂಪಗಳಲ್ಲಿ ಪ್ರಚಾರ ಮಾಡುವ ಕಾರ್ಯ ನಾವು ಮಾಡಲಿದ್ದೇವೆ ಎಂದರು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಅಶೋಕ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಉಪಾಧÀ್ಯಕ್ಷ ಮುನೀರ್ ಜನ್ಸಾಲೆ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ಸಂಯೋಜಕ ಸುಧೀರ್ ಕುಮಾರ್ ಮರೋಳಿ ಮುಖ್ಯ ಭಾಷಣ ಮಾಡಲಿದ್ದಾರೆ. ಪುತ್ತೂರು ಬ್ಲಾಕ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವö, ಮಾಜಿ ಸಚಿವ ಬಿ. ರಮಾನಾಥ ರೈö, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿö, ಮಾಜಿ ಶಾಸಕ ಜೆ.ಆರ್. ಲೋಬೋ, ಮುಖಂಡರಾದ ಪದ್ಮರಾಜ್ ಆರ್. ಪೂಜಾರಿ, ಎಂ.ಎಸ್. ಮಹಮ್ಮದ್, ರಕ್ಷಿತ್ ಶಿವರಾಂ, ಭರತ್ ಮುಂಡೋಡಿ, ಕೃಷ್ಣಪ್ಪö, ಕೃಪಾ ಆಳ್ವö, ಶಾಹುಲ್ ಹಮೀದ್, ಉಷಾ ಅಂಚನ್, ಜೋನಿ ಕಲ್ಲುಗುಂಡಿ, ಜೋಕಿಂ ಡಿಸೋಜ ಮುಂತಾದ ನಾಯಕರು ಭಾಗವಹಿಸಲಿದ್ದಾರೆ ಎಂದರು.
ಪ್ರಚಾರ ಸಮಿತಿಗೆ ಈಗಾಗಲೇ ವಿಧಾನಸಭಾ ಕ್ಷೇತ್ರವಾರು ಸಮಿತಿ, ಬ್ಲಾಕ್‌ವಾರು ಸಮಿತಿಗಳನ್ನು ರಚಿಸಲಾಗಿದೆ. ಈ ಎಲ್ಲ ಸಮಿತಿಗಳು ನಿರಂತರವಾಗಿ ಗ್ರಾಮ, ತಾಲೂಕು ಮಟ್ಟಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಚಾರ ಸಮಿತಿಯ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಡಾ.ಕೆ.ಬಿ.ರಾಜಾರಾಂ, ಬ್ಲಾಕ್ ಸಮಿತಿ ಅಧ್ಯಕ್ಷ ಅಮರನಾಥ ಗೌಡ, ಕಡಬ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಯತೀಶ್ ಕುಮಾರ್ ಬಾನಡ್ಕ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *