ಪುತ್ತೂರು: ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆ ಅ.ಕ್ರ. 51/2012 ಹಾಗೂ ಅ.ಕ್ರ. 52/2012 ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯಾದ ಕಸಬಾ ಗ್ರಾಮದ ನಿವಾಸಿ ಅಬ್ಬಾಸ್ ಅಲಿ ಅಲಾಫ್ (55) (ಪ್ರಸ್ತುತ ವಿಳಾಸ: ಪಡವು, ಮಂಗಳೂರು) ಎಂಬಾತನನ್ನು ಮಂಗಳೂರು, ಕುಲಶೇಖರ, ಬಿಕರ್ನಕಟ್ಟೆ ಪ್ರದೇಶಗಳಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮಾನ್ಯ ನ್ಯಾಯಾಲಯವು ದಿನಾಂಕ 27.02.2026ರವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮುಂಬರುವ ಪ್ರಕರಣದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪತ್ತೆ ಬಾಕಿ ಜಾಮೀನಿನಲ್ಲಿ ಬಿಡುಗಡೆಯಾಗಿ ನಂತರ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆ, ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 18/2026, ಕಲಂ 269 BNS 2023 ರಂತೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *