ಕಡಬ: ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ತರಬೇತಿಗಳು ಅತ್ಯಂತ ಅಗತ್ಯವಾಗಿದ್ದು, ಇಂತಹ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಡಬದ St. ಆನ್ಸ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಪ್ರಾಂಶುಪಾಲರಾದ ಸುನಿಲ್ ಪ್ರವೀಣ್ ಪಿಂಟೋ ಅಭಿಪ್ರಾಯಪಟ್ಟರು.
ಜೆಸಿಐ ಕಡಬ ಕದಂಬ ಹಾಗೂ ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ st. ಜೋಕಿಮ್ ಚರ್ಚ್ ಸಭಾಭವನದಲ್ಲಿ ಆಯೋಜಿಸಲಾದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜೆಸಿ ವಲಯ ತರಬೇತುದಾರ ಸುಹಾಸ್ ಮರಿಕೆ ಅವರು ಮಾತನಾಡಿ, ಜೀವನವನ್ನು ಸಮರ್ಥವಾಗಿ ಎದುರಿಸಲು ಆತ್ಮವಿಶ್ವಾಸ ಅತಿ ಮುಖ್ಯ. ಜ್ಞಾನ ವೃದ್ಧಿಯಾದಾಗ ಮಾತ್ರ ಆತ್ಮವಿಶ್ವಾಸ ಬೆಳೆಯುತ್ತದೆ. ನಿರಂತರ ಕಲಿಕೆ, ಶ್ರದ್ಧೆ ಮತ್ತು ಪರಿಶ್ರಮ ಇದ್ದಾಗ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜೆಸಿಐ ವಲಯ ಉಪಾಧ್ಯಕ್ಷ ಕಾಶಿನಾಥ್ ಗೊಗಟೆ, ಟ್ರಸ್ಟ್ ಅಧ್ಯಕ್ಷ ನಾಗರಾಜ್ ಎನ್ ಕೆ, ನಿಕಟ ಪೂರ್ವ ಅಧ್ಯಕ್ಷ ನವ್ಯಕೃಷ್ಣ, ಯುವ ಜೆಸಿ ಅಧ್ಯಕ್ಷೆ ಶಾಲಿನಿ ಪಿಂಟು ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಜೆಸಿಐ ಘಟಕದ ಅಧ್ಯಕ್ಷ ಜೇಮ್ಸ್ ಕ್ರಿಶಲ್ ಡಿಸೋಜ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕಾರ್ಯದರ್ಶಿ ಅಬ್ದುಲ್ ರಹಿಮಾನ್ ವಂದಿಸಿದರು.

Leave a Reply

Your email address will not be published. Required fields are marked *