ಕಡಬ : ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಜನಜಾಗೃತಿ ಪಾದಯಾತ್ರೆ ಕಾರ್ಯಕ್ರಮವನ್ನು ಫೆಬ್ರವರಿ 18ರಂದು ಬೆಳಿಗ್ಗೆ 9.15ಕ್ಕೆ ಹೊಸ್ಮಟ ದಿಂದ ಕಡಬ ವರೆಗೆ ಹಮ್ಮಿಕೊಳ್ಳಲಾಗಿತ್ತು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿಕಸಿತ ಭಾರತ ಉದ್ಯೋಗ ಮತ್ತು ಜೀವನೋಪಾಯ ಮಿಷನ್ (VB-GRAM Act – Viksit Bharat 2047) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಪಾದಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮದಲ್ಲಿ ಪ್ರಮುಖರು ಭಾಗವಹಿಸಲಿದ್ದು, ಗ್ರಾಮೀಣಾಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಕುರಿತ ಕೇಂದ್ರ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.
ಪಾದಯಾತ್ರೆ ಹೊಸಮಠ ಪೇಟೆಯಿಂದ ಆರಂಭವಾಯಿತು. ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಭೆಯಲ್ಲಿ ಬಿಜೆಪಿ ಸುಳ್ಯ ಮಂಡಲದ ಪ್ರಮುಖ ಮುಖಂಡರು ಮಾತನಾಡಿದರು. ” ಜನಸಾಮಾನ್ಯರ ಅಭಿವೃದ್ಧಿಯೇ ನಮ್ಮ ಗುರಿ ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪಬೇಕು, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕಾಗಿ ನಾವೆಲ್ಲರೂ ಒಗೂಡಬೇಕಿದೆ” ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳಿಯ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸುಳ್ಯ ಮಂಡಲದ ಪ್ರಮುಖ ಪದಾಧಿಕಾರಿಗಳು ಸ್ಥಳೀಯ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಪಾದಯಾತ್ರೆಯುದ್ದಕ್ಕೂ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.









