ಕಡಬ: ಪೊಲೀಸ್ ಠಾಣೆಯಲ್ಲಿ ಜಪ್ತಿಗೊಂಡ ಪ್ರಕರಣಕ್ಕೆ ಸಂಬಂಧಿಸಿದ ಸ್ವಾಧೀನಪಡಿಸಿಕೊಂಡ 3 ಹುಂಜ ಕೋಳಿಗಳನ್ನು ಇಂದು ಸಾರ್ವಜನಿಕ ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲಾಗುತ್ತಿದೆ.

ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ ವಶಪಡಿಸಿಕೊಂಡಿದ್ದ 3 ಹುಂಜ ಕೋಳಿಗಳನ್ನು ನಿಯಮಾನುಸಾರ ಹರಾಜಿಗೆ ಇಡಲಾಗಿದ್ದು, ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಹರಾಜು ಪ್ರಕ್ರಿಯೆ ಫೆಬ್ರವರಿ 19ರಂದು ಬೆಳಿಗ್ಗೆ 10.00 ಗಂಟೆಗೆ ಕಡಬ ಪೊಲೀಸ್ ಠಾಣೆ ಆವರಣದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕಡಬ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *