ಬೆಳ್ಳಾರೆ: ಅಪ್ರಾಪ್ತ ಯುವತಿಯನ್ನು ವಿವಾಹವಾಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ಜಾರ್ಖಂಡ್ ಮೂಲದ ವ್ಯಕ್ತಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವನ್ನು ಪೋಕ್ಸೋ ಕಾಯ್ದೆ, 2012ರಡಿ ದಾಖಲಿಸಲಾಗಿದೆ.

ಜಾರ್ಖಂಡ್ ಮೂಲದ ಈ ದಂಪತಿ ಬೆಳ್ಳಾರೆ ಠಾಣಾ ವ್ಯಾಪ್ತಿಯ ಗ್ರಾಮದ ತೋಟವೊಂದರಲ್ಲಿ ಕಾರ್ಮಿಕರಾಗಿ ಕೆಲಸಕ್ಕೆ ಸೇರಿಕೊಂಡಿದ್ದರು. ಇತ್ತೀಚೆಗೆ ಯುವತಿ ವೈದ್ಯಕೀಯ ತಪಾಸಣೆಗೆ ಒಳಗಾದ ವೇಳೆ, ಆಕೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರುವುದು (ಅಪ್ರಾಪ್ತಿ) ವೈದ್ಯಕೀಯ ದಾಖಲೆಗಳಿಂದ ತಿಳಿದುಬಂದಿದೆ.

ಭಾರತೀಯ ಕಾನೂನಿನ ಪ್ರಕಾರ ಅಪ್ರಾಪ್ತಿಯೊಂದಿಗೆ ದೈಹಿಕ ಸಂಬಂಧ ಹೊಂದುವುದು ಅಥವಾ ವಿವಾಹವಾಗುವುದು ಗಂಭೀರ ಅಪರಾಧವಾಗಿದ್ದು, ಪೋಕ್ಸೋ ಕಾಯ್ದೆಯಡಿ ಅಪ್ರಾಪ್ತರು ಕಾನೂನುಬದ್ಧ ಒಪ್ಪಿಗೆ ನೀಡಲು ಅರ್ಹರಲ್ಲ. ಈ ಹಿನ್ನೆಲೆ, ಪತಿ-ಪತ್ನಿಯಾಗಿದ್ದರೂ ಯುವತಿ ಅಪ್ರಾಪ್ತೆಯಾಗಿರುವುದರಿಂದ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.
ಬಂಧಿತ ಆರೋಪಿಯನ್ನು ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *