ಉಪ್ಪಿನಂಗಡಿ: ಕರ್ನಾಟಕ ಅಬಕಾರಿ ಸಂಹಿತೆ 27/2026ರಡಿ ಪ್ರಕರಣ ದಾಖಲಿಸಿಕೊಂಡು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಮಾಂಸ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬೆಲ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸ ವಕ್ಲು ಪ್ರದೇಶದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೆಬ್ರವರಿ 26ರಂದು ರಾತ್ರಿ 7.30 ಗಂಟೆ ಸುಮಾರಿಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಸುತೇಶ್ ಕೆ.ಪಿ. ಅವರ ನೇತೃತ್ವದಲ್ಲಿ ಸಿಬ್ಬಂದಿ ತಂಡ ದಾಳಿ ನಡೆಸಿತು. ರಹಸ್ಯ ಮಾಹಿತಿಯ ಆಧಾರದ ಮೇಲೆ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮಾಂಸವನ್ನು ಪತ್ತೆ ಹಚ್ಚಲಾಗಿದೆ.
ದಾಳಿಯ ವೇಳೆ 1 ಕೆ.ಜಿ ತೂಕದ 30 ಪ್ಯಾಕೆಟ್‌ಗಳು, 2 ಕೆ.ಜಿ ತೂಕದ 20 ಪ್ಯಾಕೆಟ್‌ಗಳು ಸೇರಿದಂತೆ ಒಟ್ಟು ವಿವಿಧ ಮಾದರಿಯ ಮಾಂಸವನ್ನು ವಶಪಡಿಸಿಕೊಂಡಿದ್ದು, ಅಂದಾಜು ₹11,200 ಮೌಲ್ಯದ ಮಾಂಸ ವಶವಾಗಿದೆ.

ಇದಲ್ಲದೆ ತೂಕದ ಯಂತ್ರ (₹2,000), ಕಪ್ಪು ಪ್ಲಾಸ್ಟಿಕ್ ಚೀಲ (₹100), ಮೊಬೈಲ್ ಫೋನ್ (₹10,000), ಕೆಎ-70-ಎ-1421 ನೋಂದಣಿ ಸಂಖ್ಯೆಯ ಕಪ್ಪು ಬಣ್ಣದ ಆಟೋ ರಿಕ್ಷಾ (₹1,50,000) ಹಾಗೂ ನಗದು ₹100 ವಶಪಡಿಸಿಕೊಳ್ಳಲಾಗಿದೆ.
ಬಂಧಿತನ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆ 1966 ಹಾಗೂ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಹೆಚ್ಚಿನ ವಿಚಾರಣೆ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಹೆಚ್. ಅಬ್ದುಲ್ ರಹಿಮಾನ್, ಅವರ ಪತ್ನಿ ಹಾಗೂಇನ್ನೊಬ್ಬ ಅಪರಿಚಿತ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *