ಬೆಳ್ತಂಗಡಿ: ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 56 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡು, ಆರೋಪಿಯ ಮನೆ ಆವರಣವನ್ನು ಜಪ್ತಿ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಫೆಬ್ರವರಿ 26, 2026ರ ರಾತ್ರಿ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸವಕ್ಕಲು ಪ್ರದೇಶದ ಮನೆಯೊಂದರಲ್ಲಿ ಅಕ್ರಮ ಗೋಹತ್ಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ Uppinangady Police Station ವ್ಯಾಪ್ತಿಯ ಪಿಎಸ್ಐ ಸುತೇಶ್ ಕೆಪಿ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದರು.
ಪೊಲೀಸರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಇಬ್ಬರು ವ್ಯಕ್ತಿಗಳು ಓಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳ ಪರಿಶೀಲನೆ ನಡೆಸಿದ ವೇಳೆ ಪ್ಯಾಕೆಟ್ ಮಾಡಿಟ್ಟಿದ್ದ ಗೋಮಾಂಸ ಪತ್ತೆಯಾಗಿದ್ದು, ಒಟ್ಟು 56 ಕೆಜಿ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

ಇದಲ್ಲದೆ ಸ್ಥಳದಲ್ಲಿದ್ದ ತೂಕದ ಯಂತ್ರ, ಆಟೋರಿಕ್ಷಾ, ಮೊಬೈಲ್ ಫೋನ್ ಸೇರಿದಂತೆ ಇತರೆ ವಸ್ತುಗಳನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯ ಮನೆ ಆವರಣವನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 27/2026ರಂತೆ ಪ್ರಕರಣ ದಾಖಲಾಗಿದ್ದು, Karnataka Prevention of Slaughter and Preservation of Cattle Act ಕಲಂ 4 ಮತ್ತು 12 ಹಾಗೂ ಭಾರತೀಯ ನ್ಯಾಯ ಸಂಹಿತೆ ಕಲಂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

Leave a Reply

Your email address will not be published. Required fields are marked *