ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ರವಿವಾರ (ಮಾ. 01)ರಂದು ಪುತ್ತೂರಿಗೆ ಭೇಟಿ ನೀಡಿ ಪುತ್ತೂರಿನ ಶ್ರೀ ದೇವಿ ಬೆಟ್ಟ, ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಭಾರತೀಯ ತೈಲಿಕ್ ಸಾಹು ರಾಥೋಡ್ ಮಹಾಸಭಾ ಮುಖ್ಯ ಸಲಹೆಗಾರರಾಗಿರುವ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಮೊದಲಿಗೆ ಪುತ್ತೂರಿನ ಲಕ್ಷ್ಮೀ ದೇವಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಹಾಲಕ್ಷ್ಮೀ ದೇವಿ ಅಮ್ಮನವರ ದರ್ಶನ ಪಡೆದು ಆಶೀರ್ವಾದ ಪಡೆದರು. ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ ಸಮುದಾಯದ ಕ್ಷೇಮಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.

ಇದಾದ ಬಳಿಕ ಪುತ್ತೂರಿನಲ್ಲಿ ನಡೆದಿರುವ ಜಿಲ್ಲಾ ಮಟ್ಟದ ಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ತೆರಳಿದರು. ಪುತ್ತೂರಿನ ಕೋಟೆಚಾ ಹಾಲ್‌ನಲ್ಲಿ ಆಯೋಜಿಸಲಾದ ಗಾಣಿಗ ಸಂಗಮದಲ್ಲಿ ವಿವಿಧ ಭಾಗಗಳಿಂದ ಸಮುದಾಯದ ಮುಖಂಡರು, ಕಾರ್ಯಕರ್ತರು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ಕಾರ್ಯಕ್ರಮದಲ್ಲಿ ಸಮುದಾಯದ ಏಕತೆ, ಶೈಕ್ಷಣಿಕ ಅಭಿವೃದ್ಧಿ, ಆರ್ಥಿಕ ಸಬಲೀಕರಣ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಪ್ರಹ್ಲಾದ್ ಮೋದಿ ಅವರ ಆಗಮನದಿಂದ ಕಾರ್ಯಕ್ರಮಕ್ಕೆ ಹೆಚ್ಚುವರಿ ಮೆರುಗು ಬಂದಿದೆ.

Leave a Reply

Your email address will not be published. Required fields are marked *