ಕಡಬ: ಹನುಮಾನ್ ನಗರದಲ್ಲಿರುವ ಸರಸ್ವತಿ ಅಂಗ್ಲ ಮಾಧ್ಯಮ ಶಾಲೆಯಲ್ಲಿ 2025–26ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಅಂಗವಾಗಿ ದೀಪ ಪ್ರದಾನ ಹಾಗೂ ಜನ್ಮದಾತರ ಪಾದಪೂಜನ ಕಾರ್ಯಕ್ರಮವನ್ನು 03.03.2026ನೇ ಮಂಗಳವಾರ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಲೆಯ ಮುಖ್ಯ ಅತಿಥಿ ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್, ಪಾದಪೂಜನ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಗುರು–ಶಿಷ್ಯರ ನಡುವಿನ ಗೌರವ, ಸಂಸ್ಕಾರ ಮತ್ತು ಕೃತಜ್ಞತೆಯ ಸಂಕೇತವಾಗಿ ಜನ್ಮದಾತರ ಪಾದಪೂಜನ ನಡೆಯುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಕಿರಿಯ ತರಗತಿಯ ಮಕ್ಕಳು ದೀಪ ಪ್ರದಾನ ಮಾಡುವ ಸಂಪ್ರದಾಯದ ಮೂಲಕ ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು. ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಶಿಕ್ಷಕರು ಹಾಗೂ ಅತಿಥಿಗಳು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *