ಕಡಬ: ಕಡಬ ತಾಲೂಕಿನ ಕೊಂಬಾರು ಗ್ರಾಮದ ಬೊಟ್ಟಡ್ಕದಲ್ಲಿ ಶ್ರೀ ಆದಿ ನಾಗಬ್ರಹ್ಮ ಮೊಗೆರ್ಕಳ ನೇಮೋತ್ಸವ ಸಮಿತಿ, ಶ್ರೀ ಬ್ರಹ್ಮ ಮೊಗೆರ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ಶ್ರೀ ತನ್ಮಮಾನಿಗ ಮಹಿಳಾ ಮಂಡಲದ ಆಶ್ರಯದಲ್ಲಿ 25ನೇ ವರ್ಷದ ಮೊಗೆರ್ಕಳ ನೇಮೋತ್ಸವ ಮತ್ತು ಸಭಾ ಕಾರ್ಯಕ್ರಮವು ಮಾರ್ಚ್ 7 ಮತ್ತು 8ರಂದು ನಡೆಯಲಿದೆ.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆಯ ಕೆಪಿಎಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಜಿ. ಮಾಯಿಲಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಂಬಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುಸೂದನ್ ಒಡೋಲಿ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ , ಡಾ. ರಘು ಬೆಳ್ಳಿಪಾಡಿ ಹಾಗೂ ಮಂಗಳೂರಿನ ಎ.ಜೆ. ದಂತ ಮಹಾವಿದ್ಯಾಲಯದ ಪ್ರೊಫೆಸರ್ ಡಾ. ಮಧುಸೂದನ್ ಕೈಕರೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಈ 25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮದ ನೇಮೋತ್ಸವಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೈವದ ಕೃಪೆಗೆ ಪಾತ್ರರಾಗಬೇಕೆಂದು ನೇಮೋತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *