ಮಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ), ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್.ಎ. ಶ್ರವಣಬೆಳಗೊಳ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಘಟಕವನ್ನು ಪುನರ್ ಸಂಘಟಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.

ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ನ್ಯಾಯವಾದಿ ಪರಿಮಳ ರಾವ್ ಕೆ ಅವರು ಜಿಲ್ಲೆಯ ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಪುನರ್ ನೇಮಕ ಮಾಡಿ ಸಂಘಟನೆಯನ್ನು ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಅಧ್ಯಕ್ಷೆ ಸಿಹಾನ ಬಿ.ಎಂ., ಉಪಾಧ್ಯಕ್ಷೆ ದಾಕ್ಷಾಯಿಣಿ ಎಸ್.ಜಿ., ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಸಂಘಟಕ ಅಶ್ವಿಜ್ ಶ್ರೀಧರ್, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು ಹಾಗೂ ಚಿರಂತ್ ಸಚಿನ್ ಶ್ರವಣಬೆಳಗೊಳ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *