ಉಡುಪಿ : ವೈಯಕ್ತಿಕ ಕಾರಣಗಳಿಂದ ಮನನೊಂದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.



ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಲಾರೆನ್ಸ್ ಅವರ ಪುತ್ರಿ ಸ್ವೀಟಿ (18) ಎಂದು ಗುರುತಿಸಲಾಗಿದೆ. ಇವರು ಉಡುಪಿಯ ನರ್ಸಿಂಗ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಅಲ್ಲಿನ ಆಸ್ಪತ್ರೆಯ ವಸತಿ ನಿಲಯದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.





