ಕಡಬ, ಮಾ.10: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುತು ಸಿಗದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದ್ದು, ಮೃತರ ಗುರುತು ಪತ್ತೆ ಮಾಡಲು ಸಾರ್ವಜನಿಕರ ಸಹಕಾರವನ್ನು ಕಡಬ ಪೊಲೀಸರು ಕೋರಿದ್ದಾರೆ.






ಕಳೆದ ಶುಕ್ರವಾರ ಮಧ್ಯಾಹ್ನ ವೇಳೆಗೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಬಿಳಿನೆಲೆ ಜಂಕ್ಷನ್ ಸಮೀಪದ ಅಂಗಡಿಯ ಬಳಿ ಒಬ್ಬ ವ್ಯಕ್ತಿ ಅಸ್ವಸ್ಥಗೊಂಡು ಮಲಗಿರುವ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸ್ಥಳೀಯರ ಸಹಾಯದಿಂದ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ
ಮೃತ ವ್ಯಕ್ತಿಗೆ ವಯಸ್ಸು ಸುಮಾರು 35 ರಿಂದ 40 ವರ್ಷ ಎಂದು ಅಂದಾಜಿಸಲಾಗಿದೆ. ಸಣ್ಣ ಮೈಕಟ್ಟು, ಕಪ್ಪು ಮೈಬಣ್ಣ, ಮುಖದಲ್ಲಿ ದಾಡಿ ಇದ್ದು, ಗುರುತು ಪತ್ತೆಯಾಗಿಲ್ಲ . ಮೃತ ದೇಹ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ಸಂಬಂಧಿಕರು ಅಥವಾ ಯಾರಿಗಾದರೂ ಮಾಹಿತಿ ಇದ್ದಲ್ಲಿ ಕಡಬ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಸಂಪರ್ಕಿಸಲು: 9480805364


