ನವದೆಹಲಿ: ದೇಶದಲ್ಲಿ ಇಂಧನ ದರ ಮತ್ತೆ ಏರಿಕೆಯಾಗುವ ಸಾಧ್ಯತೆ ಕಾಣಿಸಿಕೊಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗುವ ಭೀತಿ ಎದುರಾಗಿದೆ. ಈಗಾಗಲೇ ಅಡುಗೆ ಅನಿಲ ಹಾಗೂ ಅಡುಗೆ ಎಣ್ಣೆ ಬೆಲೆ ಏರಿಕೆಯಿಂದ ಬಳಲುತ್ತಿರುವ ಗ್ರಾಹಕರಿಗೆ ಇದು ಮತ್ತೊಂದು ಆರ್ಥಿಕ ಹೊರೆ ಆಗುವ ಸಾಧ್ಯತೆ ಇದೆ.




ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ಪೆಟ್ರೋಲ್ ಲೀಟರ್‌ಗೆ ಸುಮಾರು ₹20 ಹಾಗೂ ಡೀಸೆಲ್ ಲೀಟರ್‌ಗೆ ಸುಮಾರು ₹22 ರಷ್ಟು ಏರಿಕೆಯಾಗಬಹುದು ಎಂಬ ಅಂದಾಜು ವ್ಯಕ್ತವಾಗಿದೆ.
ಈ ಹೆಚ್ಚಳ ಜಾರಿಯಾದರೆ ಪೆಟ್ರೋಲ್ ದರ ಲೀಟರ್‌ಗೆ ಸುಮಾರು ₹125 ಹಾಗೂ ಡೀಸೆಲ್ ಲೀಟರ್‌ಗೆ ಸುಮಾರು ₹115 ತಲುಪುವ ಸಾಧ್ಯತೆ ಇದೆ. ಯಾವುದೇ ಕ್ಷಣದಲ್ಲೂ ದರ ಪರಿಷ್ಕರಣೆ ಕುರಿತು ಪ್ರಕಟಣೆ ಹೊರಬೀಳುವ ಸಾಧ್ಯತೆ ಇರುವುದರಿಂದ ಗ್ರಾಹಕರಲ್ಲಿ ಆತಂಕ ಉಂಟಾಗಿದೆ.
ಇದರಿಂದ ಸಾರಿಗೆ ವೆಚ್ಚ ಹೆಚ್ಚುವ ಸಾಧ್ಯತೆ ಇದ್ದು, ಅದರ ಪರಿಣಾಮವಾಗಿ ನಿತ್ಯೋಪಯೋಗಿ ವಸ್ತುಗಳ ಬೆಲೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.




