ಪುತ್ತೂರು: ಜನವರಿ 2026 ರಲ್ಲಿ ನಡೆದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿ ಎ ಫೌಂಡೇಷನ್ ಪರೀಕ್ಷೆಯಲ್ಲಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಹಿರಿಯ
ವಿದ್ಯಾರ್ಥಿಗಳಾದ ನೀತಿ. ಎನ್. ಬಿ ಮತ್ತು ಇಬ್ರಾಹಿಂ ಶಾಹನ್ ಇವರು ಉತ್ತೀರ್ಣರಾಗುವ ಮೂಲಕ ಉತ್ತಮ ಸಾಧನೆಯನ್ನು ದಾಖಲಿಸಿದ್ದಾರೆ.

ನೀತಿ. ಎನ್. ಬಿ ಕೊಲ್ಲಮೊಗ್ರು ನಿವಾಸಿ ಬಾಲಕೃಷ್ಣ ಗೌಡ ಮತ್ತು ಶಾರದಾ ದಂಪತಿಗಳ ಪುತ್ರಿ.
ಇಬ್ರಾಹಿಂ ಶಾಹನ್ ಬಾರ್ಯ ನಿವಾಸಿ ಹೈದರ್ ಮತ್ತು ಉಮ್ಮುಲ್ ಸಲ್ಮಾ ದಂಪತಿಗಳ ಪುತ್ರ.
ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಉಪನ್ಯಾಸಕರಾದ ಸಂಜಯ್ ಎಸ್, ರಾಹುಲ್, ಭರತ್ ಜಿ. ಪೈ ಹಾಗೂ ಗೀತಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *