ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಪ್ರದೇಶದಲ್ಲಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವ ಛಾಯಾಗ್ರಾಹಕ ಮೃತಪಟ್ಟ ದುರ್ಘಟನೆ ನಡೆದಿದೆ.
ಮೃತರನ್ನು ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಎಂದು ಗುರುತಿಸಲಾಗಿದೆ.
ರಾತ್ರಿ ಪಾಣೆಮಂಗಳೂರು ಬಳಿ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ರಕ್ಷಿತ್ ಶೆಟ್ಟಿಯನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ರಕ್ಷಿತ್ ಶೆಟ್ಟಿ ಛಾಯಾಗ್ರಾಹಕರ ಸಂಘದ ಬಂಟ್ವಾಳ ವಲಯದ ಸಕ್ರಿಯ ಸದಸ್ಯರಾಗಿದ್ದು, ಅತ್ಯುತ್ತಮ ವಿಡಿಯೋಗ್ರಾಫರ್ ಆಗಿ ಪರಿಚಿತರಾಗಿದ್ದರು.
ಇನ್ನೂ ದುಃಖಕರ ಸಂಗತಿಯೆಂದರೆ, ಅವರ ಮಗಳ 10ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮವನ್ನು ಮಾರ್ಚ್ 15ರಂದು ಮನೆಯಲ್ಲೇ ಆಚರಿಸಲು ಸಿದ್ಧತೆಗಳು ನಡೆದಿದ್ದವು. ಆದರೆ ಈಗ ಸಂಭ್ರಮದ ಮನೆಗೆ ಸಾವಿನ ನೆರಳು ಆವರಿಸಿದೆ.
ಇದಕ್ಕೂ ಮೊದಲು ರಕ್ಷಿತ್ ಅವರ ಸಹೋದರ ರಂಜಿತ್ ಕೂಡ ಕೆಲವು ವರ್ಷಗಳ ಹಿಂದೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಲಗಿದ ಸ್ಥಿತಿಯಲ್ಲೇ ಮನೆಯಲ್ಲಿದ್ದಾರೆ. ಅತ್ಯಂತ ಬಡ ಕುಟುಂಬವಾಗಿರುವ ಈ ಮನೆ ಈಗ ಆಧಾರಸ್ತಂಭವನ್ನೇ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

Leave a Reply

Your email address will not be published. Required fields are marked *