ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಂಗವಾಗಿ ಬ್ರಹ್ಮಕಲಶಾಭಿಷೇಕ ಮಹೋತ್ಸವವನ್ನು ಆಯೋಜಿಸಲಾಗಿದೆ.

ಮಾರ್ಚ್ 30, 2026ರಂದು ಸೋಮವಾರದಿಂದ ಪ್ರಾರಂಭವಾಗುವ ಈ ಧಾರ್ಮಿಕ ಕಾರ್ಯಕ್ರಮವು ಏಪ್ರಿಲ್ 6, 2026ರಂದು ಸೋಮವಾರದವರೆಗೆ ನಡೆಯಲಿದೆ. ಈ ಅವಧಿಯಲ್ಲಿ ವಿವಿಧ ವೈದಿಕ ಸಾಂಸ್ಕೃತಿಕ ಕಾರ್ಯಕ್ರಮಗಳು, ಪೂಜೆಗಳು ಹಾಗೂ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.
ದೇವಸ್ಥಾನದ ಅಭಿವೃದ್ಧಿ ಮತ್ತು ಪುನರ್ ಪ್ರತಿಷ್ಠೆಯ ಭಾಗವಾಗಿ ನಡೆಯುವ ಈ ಮಹೋತ್ಸವಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿದೆ. ದೇವಸ್ಥಾನ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಕಾರ್ಯಕ್ರಮದ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸುತ್ತಿದ್ದಾರೆ.
ಭಕ್ತರು ಕುಟುಂಬ ಸಮೇತರಾಗಿ ಆಗಮಿಸಿ ದೇವರ ಆಶೀರ್ವಾದ ಪಡೆಯುವಂತೆ ದೇವಸ್ತಾನದ ವತಿಯಿಂದ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *