ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಮಾರ್ಚ್ ತಿಂಗಳಿನ 21 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 21 ದಿನದಲ್ಲಿ 2,48,28,737 ರೂ. ಕಾಣಿಕೆ ಸಂಗ್ರಹವಾಗಿದೆ.

ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಮಾರ್ಚ್ ತಿಂಗಳಿನ ಈ 21 ದಿನಗಳಲ್ಲಿ ಕೋಟ್ಯಂತರ ರೂ. ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಕಾಣಿಕೆಯಲ್ಲಿ 2,39,26,137 ರೂ. ಕರೆನ್ಸಿ ನೋಟುಗಳು. 9,2,600 ರೂ. ನಾಣ್ಯಗಳು ಸಂಗ್ರಹವಾಗಿವೆ. 14 ಗ್ರಾಂ ಚಿನ್ನ, 2,163 ಗ್ರಾಂ ಬೆಳ್ಳಿಯನ್ನ ಕಾಣಿಕೆ ರೂಪದಲ್ಲಿ ಭಕ್ತರು ನೀಡಿದ್ದಾರೆ.

ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮಂಗಳವಾರ ರಾತ್ರಿ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ ಭಕ್ತರು, ಕರ ಸೇವಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *