ಕಡಬ : ಮನೆಯ ಹೊರಭಾಗದ ಕೊಟ್ಟಿಗೆಯಲ್ಲಿ ಮಲಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಮೇಶ್ ಗೌಡ ಎಂದು ಗುರುತಿಸಲ್ಪಟ್ಟ ಆರೋಪಿ ನವೆಂಬರ್ 13ರ ರಾತ್ರಿ ಈ ಕೃತ್ಯಕ್ಕೆ ಯತ್ನಿಸಿದ್ದಾನೆ.

ಮಹಿಳೆ ಬಲವಾಗಿ ಸಹಾಯಕ್ಕಾಗಿ ಕಿರುಚಿದಾಗ, ಮನೆಯೊಳಗಿದ್ದ ಗಂಡ ಮತ್ತು ಮಕ್ಕಳು ಹೊರಗೆ ಓಡಿ ಬಂದಿದ್ದು, ಸ್ಥಳೀಯರು ಆರೋಪಿಯನ್ನು ಗುರುತಿಸಲು ಸಾಧ್ಯವಾಗಿದೆ. ಬಂಧಿಸಲು ಯತ್ನಿಸಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ವೇಳೆ ಮಹಿಳೆಗೆ ಜಾತಿ ನಿಂದನೆಯೂ ನಡೆದಿರುವುದಾಗಿ ದೂರು ನೀಡಲಾಗಿದೆ.

ಮಹಿಳೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಕಡಬ ಪೊಲೀಸರು, ನವೆಂಬರ್ 16ರಂದು ಆರೋಪಿ ಉಮೇಶ್ ಗೌಡರನ್ನು ಬಂಧಿಸಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *