ನೆಲ್ಯಾಡಿ: ಸಣ್ಣಪುಟ್ಟ ಹಣಕಾಸಿನ ವಿಚಾರವಾಗಿ ಆರಂಭವಾದ ವಾಗ್ವಾದ ಗಲಾಟೆಗೆ ತಿರುಗಿ, ಐವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿರುವ ಘಟನೆ ಕೊಕ್ಕಡದಲ್ಲಿ ನಡೆದಿದೆ.
ಮಾರ್ಚ್ 29ರಂದು ರಾತ್ರಿ, ಕೊಕ್ಕಡ ನಿವಾಸಿ ಅಕ್ಷಯ್ (31) ಸ್ಥಳೀಯ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಮದ್ಯ ಸೇವಿಸುತ್ತಿದ್ದ ವೇಳೆ, ಅಲ್ಲಿಗೆ ಬಂದ ಯತೀಶ್ ಎಂಬಾತ ಹಳೆಯ ಹಣಕಾಸಿನ ವಿಚಾರವನ್ನು ಮುಂದಿಟ್ಟು ಅಕ್ಷಯ್ ಜೊತೆ ತಕರಾರು ಆರಂಭಿಸಿದ್ದಾನೆ. ಮಾತಿನ ಚಕಮಕಿ ತೀವ್ರಗೊಂಡು, ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿದಲ್ಲದೆ, ಕೈಯಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಈ ವೇಳೆ ಯತೀಶ್‌ಗೆ ಬೆಂಬಲವಾಗಿ ಆತನ ಸ್ನೇಹಿತರಾದ ಯತೀಶ್, ಧನುಷ್ ಭಂಡಾರಿ, ಶರತ್ ಭಂಡಾರಿ ಹಾಗೂ ಪ್ರವೀಣ್ ಕೂಡ ಸೇರಿ ಅಕ್ಷಯ್ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಗಾಯಗೊಂಡ ಅಕ್ಷಯ್ ನೀಡಿದ ದೂರಿನ ಆಧಾರದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *