ಕಡಬ: ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ಶಿವಧ್ವಜ್ ಅವರು ಇತ್ತೀಚೆಗೆ ಕಡಬದ ಸುಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನ ಮಂಡಳಿಯವರು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಅರ್ಚನೆ ಮತ್ತು ಪೂಜೆ ಸಲ್ಲಿಸಿದ ಶಿವಧ್ವಜ್ ಅವರು ಲೋಕಕಲ್ಯಾಣ ಹಾಗೂ ಕನ್ನಡ ಚಿತ್ರರಂಗದ ಏಳಿಗೆಗಾಗಿ ಪ್ರಾರ್ಥಿಸಿದರು.
ಈ ವೇಳೆ ದೇವಸ್ಥಾನದ ಅರ್ಚಕರು ತೀರ್ಥಪ್ರಸಾದ ನೀಡಿ ಆಶೀರ್ವಚನ ನೀಡಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ದೇವಿಯ ದರ್ಶನದಿಂದ ಮನಸ್ಸಿಗೆ ತುಂಬಾ ನೆಮ್ಮದಿ ಸಿಕ್ಕಿದೆ. ತಾಯಿಯ ಆಶೀರ್ವಾದ ಸದಾ ನಮ್ಮೆಲ್ಲರ ಮೇಲೆ ಇರಲಿ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *