ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯಲ್ಲಿ ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮದ ‘ಸ್ಟುಡಿಯೋ’ವನ್ನು ತಕ್ಷಣ ಮುಚ್ಚಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಆದೇಶಿಸಿದೆ. ಪರಿಸರ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಆದೇಶ ಹೇಳಿದೆ.

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಶುರುವಾಗಿ ಒಂದು ವಾರವಷ್ಟೇ ಮುಗಿದು, ಎರಡನೇ ವಾರಕ್ಕೆ ಕಾಲಿಟ್ಟಿದೆ. ಆದರೆ ಈ ನಡುವೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಯಕ್ರಮವನ್ನು ರದ್ಧುಗೊಳಿಸುವಂತೆ ಆದೇಶ ಹೊರಡಿಸಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿಯಲ್ಲಿ ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮದ ‘ಸ್ಟುಡಿಯೋ’ವನ್ನು ತಕ್ಷಣ ಮುಚ್ಚಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಆದೇಶಿಸಿದೆ. ಪರಿಸರ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಆದೇಶ ಹೇಳಿದೆ.

ಮಂಡಳಿಯು ಅಕ್ಟೋಬರ್ 6 ರಂದು ವೆಲ್ಸ್ ಸ್ಟುಡಿಯೋಸ್ ಮತ್ತು ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ (ಜಾಲಿ ವುಡ್ ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್) ಗೆ ನೋಟಿಸ್ ನೀಡಿದ್ದು, ಸ್ಥಳದಲ್ಲಿನ ಎಲ್ಲಾ ಚಟುವಟಿಕೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸುವಂತೆ ನಿರ್ದೇಶಿಸಿದೆ.

ಆವರಣವನ್ನು ದೊಡ್ಡ ಪ್ರಮಾಣದ ಮನರಂಜನೆ ಮತ್ತು ಸ್ಟುಡಿಯೋ ಕಾರ್ಯಾಚರಣೆಗಳಿಗೆ ಬಳಸಲಾಗುತ್ತಿದೆ, ನೀರು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1974 ಮತ್ತು ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1981 ರ ಅಡಿಯಲ್ಲಿ ಚಟುವಟಿಕೆಗಳಿಗೆ ಅಗತ್ಯವಾದ ಒಪ್ಪಿಗೆಯನ್ನು ಪಡೆಯದೆಯೇ ಬಳಸಲಾಗುತ್ತಿದೆ ಎಂದು ಮಂಡಳಿ ತನ್ನ ಆದೇಶದಲ್ಲಿ ತಿಳಿಸಿದೆ.

By PrimeTV

Leave a Reply

Your email address will not be published. Required fields are marked *