ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಪ್ರದೇಶದಲ್ಲಿರುವ ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಾರ್ಚ್ 30, 2026ರಂದು ನಡೆದ ಈ ಕಳವು ಪ್ರಕರಣದ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 45/2026ರಂತೆ ಬಿಎನ್‌ಎಸ್ 2023ರ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿತ್ತು.

ತನಿಖೆಯ ಫಲವಾಗಿ ಏಪ್ರಿಲ್ 6ರಂದು ಸುಳ್ಯ ತಾಲೂಕಿನ ಕೆಮ್ರಾಜೆ ಎಲಿಮಳೆ ಪ್ರದೇಶದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ನಿವಾಸಿ ಮೊಹಮ್ಮದ್ ಸಲ್ಮಾನ್ (35) ಎಂದು ಗುರುತಿಸಲಾಗಿದೆ.
ಆರೋಪಿಯಿಂದ ಕಳವು ಮಾಡಲಾಗಿದ್ದ ರೂ.2,000 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *